ಪ್ರತಿದಿನ ಅರ್ಧಗಂಟೆ ಯೋಗಾಭ್ಯಾಸ ಮಾಡಿ: ಜಿಲ್ಲಾಧಿಕಾರಿ ಡಾ.ಕುಮಾರ ಸಲಹೆ

Yogotsava Mandya
Published on

ಮಂಡ್ಯ: ವಿದ್ಯಾರ್ಥಿಗಳು ಪ್ರತಿದಿನ ಅರ್ಧಗಂಟೆ ಯೋಗಾಭ್ಯಾಸ ಮಾಡುವುದನ್ನು ರೂಡಿಸಿಕೊಳ್ಳಬೇಕು. ಯೋಗ ನಮ್ಮ ದಿನನಿತ್ಯ ಜೀವನದ ಅವಿಭಾಜ್ಯ ಕೆಲಸವಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸಲಹೆ ನಿಡಿದರು.

ನಗರದ ಸೇಂಟ್ ಜಾನ್ಸ್ ಶಾಲೆಯಲ್ಲಿ ಜಿಲ್ಲಾಡಳಿತ ಮತ್ತು ಆಯುಷ್ ಇಲಾಖೆ ವತಿಯಿಂದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಯೋಗೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಶಿಸ್ತು, ವಿನಯತೆ, ದೇಶದ ಬಗ್ಗೆ ಗೌರವ ಹೆಚ್ಚಿರುತ್ತದೆ. ವಿದ್ಯಾರ್ಥಿಗಳು ಯೋಗವನ್ನು ಒಂದು ದಿನಕ್ಕೆ ಸೀಮಿತಗೊಳಿಸದೇ ಪ್ರತಿದಿನ ಅಭ್ಯಾಸ ಮಾಡಿ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಸೀತಾಲಕ್ಷ್ಮೀ, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ್, ಆಯುಷ್ ಇಲಾಖೆಯ ಡಾ.ಶ್ರೀನಿವಾಸ್, ಡಾ.ಸುಹಾಸಿನಿ, ಶಿವಕುಮಾರ್, ರವಿ, ಭಕ್ತವತ್ಸಲ, ನಾಗಮ್ಮ, ಡಾ.ಅನಿಲ್‌ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net