ಹೆಲ್ಮೆಟ್ ಧರಿಸದಿದ್ದರೆ ಬೀಳಲಿದೆ ದಂಡ

ಹೆಲ್ಮೆಟ್ ಧರಿಸದಿದ್ದರೆ ಬೀಳಲಿದೆ ದಂಡ
Published on

ತಿ.ನರಸೀಪುರ: ಪಟ್ಟಣದಲ್ಲಿ ಇನ್ನು ಮುಂದೆ ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡುವ ಸವಾರರಿಗೆ ಬೀಳಲಿದೆ ದಂಡ. ಪಟ್ಟಣದ ವಿದ್ಯೋದಯ ಕಾಲೇಜು ವೃತ್ತದ ಬಳಿ ಪೊಲೀಸ್ ಇಲಾಖೆಯಿಂದ ಹೆಲ್ಮೆಟ್ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಸಿಪಿಐ ಧನಂಜಯ್, ಜತೆಗೆ ಬೈಕ್, ಸ್ಕೂಟರ್‌ಗಳನ್ನು ವಶಕ್ಕೆ ತೆಗೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹೇಳಿದರು.

ಗ್ರಾಮೀಣ ಪ್ರದೇಶದ ಅನೇಕ ಪಾಲಕರು ಶಾಲಾ, ಕಾಲೇಜುಗಳಿಗೆ ಕರೆತರುವ ಮಕ್ಕಳಿಗೆ ಹೆಲ್ಮೆಟ್ ಹಾಕದೆ ಹಾಗೂ ತಾವು ಧರಿಸದೆ ಸವಾರಿ ಮಾಡುತ್ತಿದ್ದಾರೆ. ಈಗಾಗಲೇ ಕಾಲೇಜು ರಸ್ತೆ, ನಂಜನಗೂಡು ರಸ್ತೆಯಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ ಎಂದು ತಿಳಿಸಿದರು.

ನಂತರ ಪೊಲೀಸರು ಪಟ್ಟಣದ ತಾಲೂಕು ಕಚೇರಿ ರಸ್ತೆ, ಬ್ಯಾಂಕ್ ರಸ್ತೆ, ಚಿತ್ರಮಂದಿರ ರಸ್ತೆ, ಲಿಂಕ್ ರಸ್ತೆ, ಖಾಸಗಿ ಬಸ್ ನಿಲ್ದಾಣ ಹಾಗೂ ಕಾಲೇಜು ರಸ್ತೆ ಮೂಲಕ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net