ಯುವ ಪೀಳಿಗೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿ

26sunti01
ಸುಂಟಿಕೊಪ್ಪ ಪೊಲೀಸ್ ಠಾಣೆಯ ಪ್ರಭಾರ ಠಾಣಾಧಿಕಾರಿ ರಮೇಶ್ ಹಾಗೂ ಅಪರಾಧ ವಿಭಾಗದ ಪಿಎಸ್‌ಐ ಸ್ವಾಮಿ ಹಾಗೂ ಕಾಲೇಜುಉಪನ್ಯಾಸಕಿ ಸುನಿತಾ ಗಿರೀಶ್ ಅವರುಗಳು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸುತ್ತಿರುವುದು.
Published on

ಸುಂಟಿಕೊಪ್ಪ: ಮೋಜು, ಮಸ್ತಿಗಾಗಿ ಮತ್ತು ಕ್ಷಣಿಕ ಸುಖ ಅನುಭವಿಸುವ ದಿಸೆಯಲ್ಲಿ ಯುವ ಪೀಳಿಗೆ ಮಾದಕ ದ್ರವ್ಯಗಳ ವ್ಯಸನಕ್ಕೆ ಬಲಿಯಾಗುವತ್ತಿರುವುದು ಅತಂಕಕಾರಿ ಬೆಳವಣಿಗೆಯಾಗಿದೆ. ಮಾದಕ ವಸ್ತುಗಳು ಯುವ ಸಮುದಾಯವನ್ನು ಕಾಡುತ್ತಿರುವ ಗಂಭೀರ ಸಮಸ್ಯೆಯಾಗಿದೆ ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಲತಾ ಕಳವಳ ವ್ಯಕ್ತಪಡಿಸಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯ ವ್ಯಸನಮುಕ್ತ ದಿನದ ಅಂಗವಾಗಿ ಬುಧವಾರ ಆಯೋಜಿಸಲಾಗಿದ್ದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಶೆ ಬರಿಸುವ ಮಾದಕವಸ್ತುಗಳು ನಮ್ಮ ದೇಹ ಮತ್ತು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಿ, ಜೀವನ ನಶ್ವರ ಮಾಡಿಬಿಡುತ್ತದೆ. ಹಾಗಾಗಿ ಓದುವ ವಯಸ್ಸಿನಲ್ಲಿ ಮಾದಕ ವಸ್ತುಗಳಿಂದ ದೂರ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸುಂಟಿಕೊಪ್ಪ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೇಬಲ್ ರಮೇಶ್ ಮಾತನಾಡಿ, ಮಾದಕ ವಸ್ತುಗಳಿಗೆ ಯುವಕರು ಬಲಿಯಾಗುತ್ತಿರುವುದು ಅತಂಕದ ವಿಚಾರ. ವಿದ್ಯಾರ್ಥಿ ಸಮುದಾಯವನ್ನು ಮಾದಕ ದ್ರವ್ಯಗಳು ದಾರಿ ತಪ್ಪಿಸುತ್ತಿವೆ. ಅಲ್ಲದೆ ದೈಹಿಕ, ಮಾನಸಿಕವಾಗಿ ಮನುಷ್ಯನ ಜೀವನವನ್ನು ಜರ್ಜರಿತವನ್ನಾಗಿ ಮಾಡುತ್ತಿವೆ. ಮಾದಕ ದ್ರವ್ಯಗಳನ್ನು ಮಾರಾಟ ಮಾಡುವುದು ಮತ್ತು ಸೇವಿಸುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವುದು ಕೂಡ ಕ್ರಿಮಿನಲ್ ಅಪರಾಧ ಪ್ರಕರಣಗಳಲ್ಲಿ ಒಂದಾಗಿದೆ ಎಂದರು.

ಸುಂಟಿಕೊಪ್ಪ ಪೊಲೀಸ್ ಠಾಣೆಯ ಪ್ರಭಾರ ಠಾಣಾಧಿಕಾರಿ ರಮೇಶ್, ಅಪರಾಧ ವಿಭಾಗದ ಪಿಎಸ್‌ಐ ಸ್ವಾಮಿ, ಕಾಲೇಜು ಉಪನ್ಯಾಸಕಿ ಸುನಿತಾ ಗಿರೀಶ್ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net