ಪೊಲೀಸರಿಂದ ಹಲ್ಲೆ ಆರೋಪ, ಯುವಕ ಆತ್ಮಹತ್ಯೆ

kls1 (11)
Published on

ಕಳಸ: ಪೊಲೀಸರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ, ನನಗೆ ನ್ಯಾಯ ಕೊಡಿಸಿ ಎಂದು ಡೆತ್‌ನೋಟ್ ಬರೆದಿಟ್ಟು ಸಂಸೆಯ ಯುವಕ ನಾಗೇಶ್(29) ತನ್ನ ಮನೆಯ ಪಕ್ಕದಲ್ಲಿರುವ ಸಂಬಂಧಿಕರ ಮನೆಯಲ್ಲಿ ಬೆಳಗ್ಗೆ 8 ಗಂಟೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಂಸೆ ಗ್ರಾಮದ ಬಸ್ತಿಗದ್ದೆಯ ನಿವಾಸಿ ನಾಗೇಶ್, ಕಳೆದ ತಿಂಗಳು ಸಂಸೆ ಗ್ರಾಮದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ನನ್ನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ದೂರು ನೀಡಿದ್ದರು. ಇದೇ ದೂರಿನ ಬೆನ್ನಲ್ಲೇ ನಾಗೇಶ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಕುದುರೆಮುಖ ಪೊಲೀಸರು ನಾಗೇಶ್ ವಿರುದ್ಧವೂ ಪ್ರಕರಣ ದಾಖಲಿಸಿ ಆತನ ಆಟೋ ಮತ್ತು ಅಡಕೆಗೆ ಔಷಧ ಸಿಂಪಡಿಸುವ ಯಂತ್ರವನ್ನು ವಶಪಡಿಸಿಕೊಂಡಿದ್ದರು.

ನಾಗೇಶ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆದುಕೊಂಡಿದ್ದರು. ಆದರೆ ತನ್ನ ಆಟೋ ಬಿಡಿಸಿಕೊಳ್ಳಲಾರದೆ, ದುಡಿಮೆಯೂ ಇಲ್ಲದೆ ಆಟೋ ಸಾಲದ ಕಂತು ಕೂಡ ಕಟ್ಟಲಾರದೆ ಆರ್ಥಿಕ ಸಂಕಷ್ಟದಿಂದ ಕಂಗಾಲಾಗಿದ್ದರು ಎನ್ನಲಾಗಿದೆ. ಪೊಲೀಸರ ಜತೆಗಿನ ಜಟಾಪಟಿ ನಂತರ ನಾಗೇಶ್ ತನ್ನ ೆನ್ ಕರೆಯನ್ನೂ ಸ್ವೀಕರಿಸುತ್ತಿರಲಿಲ್ಲ. ಪೊಲೀಸರ ಬಗ್ಗೆ ಹೆದರಿದ್ದರು ಎಂದು ಆತನ ಪತ್ನಿ ತಿಳಿಸಿದ್ದಾರೆ.

ಕಳಸ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಜಯಕುಮಾರ್, ಕೊಪ್ಪ ಡಿವೈಎಸ್‌ಪಿ ಬಾಲಾಜಿ ಸಿಂಗ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net