

ರಾಣೆಬೆನ್ನೂರ: ವಿಪರೀತ ಮದ್ಯ ಸೇವಿಸುತ್ತಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೋಟೆ ಓಣಿಯಲ್ಲಿ ನಡೆದಿದೆ.
ನವೀನ ಕೋಟೆಪ್ಪ ತಳವಾರ (22) ಮೃತ ಯುವಕ.
ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಇದರಿಂದ ಬೇಸತ್ತು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.