

ವಿಜಯವಾಣಿ ಸುದ್ದಿಜಾಲ ಧಾರವಾಡ
ಯುವಕನೊಬ್ಬ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಲೋಕೂರ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ರ‍್ಯಾವಪ್ಪ ಚನ್ನಬಸಪ್ಪ ಗಾಂಜಿಯವರ (35) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತನ ಪತ್ನಿ ತವರಿಗೆ ಹೋಗಿದ್ದರಿಂದ ಮನ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡ ಗರಗ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.