

ಬಾಗಲಕೋಟೆ: ಊರಿಗೆ ಹೊರಟಿದ್ದ ಪ್ರಯಾಣಿಕರೊಬ್ಬರು ಬಸ್ನಲ್ಲೇ ಮೃತಪಟ್ಟಿದ್ದಾನೆ.
ಇಳಕಲ್ ತಾಲೂಕಿನ ಕರಡಿ ಗ್ರಾಮದ ಸುನೀಲ ಹನಮಗೌಡ ಪಾಟೀಲ(25) ಮೃತ. ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಗುರುವಾರ ಮಂಗಳೂರು-ಕರಡಿ ಮಾರ್ಗದ ಸಾರಿಗೆ ಬಸ್ನಲ್ಲಿ ಸ್ವಗ್ರಾಮಕ್ಕೆ ಹೊರಟಿದ್ದ. ಇದನ್ನೂ ಓದಿರಿ ಪರಸ್ತ್ರೀ ಜತೆ ಮೂರು ಮಕ್ಕಳ ತಂದೆಗೆ ಲವ್ವಿಡವ್ವಿ! ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದವರ ಕಥೆ ಏನಾಯ್ತು?
ಇಳಕಲ್ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿದಾಗ ಯುವಕ ಮೃತಪಟ್ಟಿರುವುದು ಗೊತ್ತಾಗಿದೆ. ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಾಪಸ್ ಊರಿಗೆ ಹೋಗುತ್ತಿದ್ದ ಎನ್ನಲಾಗಿದೆ. ಹೆತ್ತವರ ಮಡಿಲು ಸೇರುವ ಮುನ್ನವೇ ಮಾರ್ಗದಲ್ಲೇ ಜವರಾಯ ಯುವಕನ ಪ್ರಾಣ ಹೊತ್ತೊಯ್ದಿದ್ದಾನೆ. ಮಗನ ಸಾವಿನ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ಸ್ಥಳಕ್ಕೆ ಭೇಟಿ ನೀಡಿದ ಇಳಕಲ್ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.