ಬೈಕ್ ಅಪಘಾತದಲ್ಲಿ ಯುವಕ ಸಾವು

IMG-20231110-WA0035
Published on

ಸೋಮವಾರಪೇಟೆ: ತಾಕೇರಿ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದ ಬೈಕ್ ಅಪಘಾತದಲ್ಲಿ ಸವಾರ ಮೃತಪಟ್ಟಿದ್ದಾರೆ.

ಕೃಷಿಕ ಚಿನ್ನಪ್ಪ ಅವ ಪುತ್ರ ಕೆ.ಸಿ.ಸಂದೀಪ್(35) ಮೃತರು. ಬೈಕ್ ಅಪಘಾತವಾದ ಸ್ಥಿತಿಯಲ್ಲಿ ಬಿದ್ದಿದ್ದ ಸಂದೀಪ ಅವರನ್ನು ಸ್ನೇಹಿತರು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತನ ತಂದೆ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಸೋಮವಾರಪೇಟೆ ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಇನ್ಸ್‌ಪೆಕ್ಟರ್ ರಾಮಚಂದ್ರನಾಯಕ್ ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net