ಯುವಕ ಸಾವು

Nagaraja
Published on

ಭಟ್ಕಳ: ಶಂಕಿತ ಇಲಿಜ್ವರ ಬಾಧೆಯಿಂದ ಬಳಲುತ್ತಿದ್ದ ಯುವಕನೊಬ್ಬ ಮಂಗಳೂರಿನ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾನೆ.

ಮಣ್ಕುಳಿ ನಿವಾಸಿ ನಾಗರಾಜ ಮಂಜುನಾಥ ನಾಯ್ಕ(38) ಮೃತಪಟ್ಟ ಯುವಕ. ಕಳೆದ ಕೆಲವು ದಿನಗಳ ಹಿಂದೆ ಅಸ್ವಸ್ಥಗೊಂಡು ತಾಲೂಕು ಸರ್ಕಾರಿ ಅಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದರು. ಅಲ್ಲಿ ಪರಿಶೀಲಿಸಿದ ವೈದ್ಯರು ಅಪೆಂಡಿಸೈಟಿಸ್ ಎಂದು ಪತ್ತೆ ಹಚ್ಚಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳುವಂತೆ ಸೂಚಿಸಿದ್ದಾರೆ. ಮಂಗಳೂರಿನಲ್ಲಿ ಬಿಳಿ ರಕ್ತಕಣಗಳ ಕೊರತೆಯಿಂದ ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಇಲಿ ಜ್ವರದ ಶಂಕೆ ವ್ಯಕ್ತವಾಗಿದ್ದು, ಗುರುವಾರ ತಾಲೂಕಾಸ್ಪತ್ರೆ ವೈದ್ಯರು ಅವರ ಮನೆ ಹಾಗೂ ಸುತ್ತಲಿನ ಪ್ರದೇಶವನ್ನು ಪರಿಶೀಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net