ಕೈಲಾಂಚ: ಹೋಬಳಿಯ ಅವ್ವೇರಹಳ್ಳಿ ರೇವಣಸಿದ್ದೇಶ್ವರ ಬೆಟ್ಟದ ಸಮೀಪದ ಅಮ್ಮನಪುರದೊಡ್ಡಿ ಗ್ರಾಮದಲ್ಲಿ ಹಾವು ಕಡಿದು ಶಿವನಾಯ್ಕ (24) ಎಂಬಾತ ಮೃತಪಟ್ಟಿದ್ದಾನೆ. ಮಂಗಳವಾರ ಸಂಜೆ ಜಮೀನಿನಲ್ಲಿ ಹುಲ್ಲು ಕೊಯ್ಯುವ ಸಂದರ್ಭದಲ್ಲಿ ಹಾವು ಕಚ್ಚಿದ್ದು, ತಕ್ಷಣ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾನೆ.