ಲಾರಿ ಡಿಕ್ಕಿ ಹೊಡೆದು ಯುವಕ ಸಾವು

Accident
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ನರೇಂದ್ರ ಕ್ರಾಸ್ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ನವಲಗುಂದದ ಬಸವರಾಜ ಮಹಾದೇವಪ್ಪ ಪಲ್ಲೇದ (19) ಮೃತ ಯುವಕ. ಈತ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net