ಚಾಮರಾಜನಗರ: ತಾಲೂಕಿನ ಕುದೇರು ಬಸ್ ನಿಲ್ದಾಣದಲ್ಲಿ ಯುವಕನೊಬ್ಬ ಮಲಗಿದ ಸ್ಥಿತಿಯಲ್ಲಿ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಯಳಂದೂರು ತಾಲೂಕಿನ ಅಗರ ಗ್ರಾಮದ ಎಸ್.ಪ್ರದೀಪ್ (25) ಮೃತ ಯುವಕ.
ಈತ ಬುಧವಾರ ರಾತ್ರಿ ವೇಳೆಯಲ್ಲಿ ಕುದೇರು ಬಸ್ ನಿಲ್ದಾಣದ ಅಂಗಡಿಯೊಂದರ ಮುಂಭಾಗ ಮಲಗಿದ್ದ. ಗುರುವಾರ ಬೆಳಗ್ಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ವಿಷಯ ತಿಳಿದ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಕುದೇರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.