ಯುಗಾದಿ ಸಂಭ್ರಮದ ನಡುವೆ ಯುವಕನ ಮರ್ಡರ್: ಮಂಡ್ಯ ನಗರದಲ್ಲಿ ನಡುರಾತ್ರಿ ನಡೆಯಿತು ಕೃತ್ಯ

crime
Published on

ಮಂಡ್ಯ: ಹಳೆ ದ್ವೇಷದ ಹಿನ್ನೆಲೆಯಲ್ಲಿ ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿ ಮಂಗಳವಾರ ರಾತ್ರಿ ಯುವಕನನ್ನು ಕೊಲೆ ಮಾಡಲಾಗಿದೆ.
ಸ್ವರ್ಣಸಂದ್ರ ಬಡಾವಣೆಯ ಅಕ್ಷಯ್(24) ಮೃತ. ಯುಗಾದಿ ಹಬ್ಬದ ಸಂಭ್ರಮಾಚರಣೆಯಲ್ಲಿದ್ದ ಯುವಕನನ್ನು ಫೋನ್ ಮಾಡಿ ಕರೆಸಿಕೊಳ್ಳಲಾಗಿದೆ. ನಂತರ ಮಾರಾಕಾಸ್ತ್ರದಿಂದ ತಲೆ ಹೊಡೆದು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಮಂಡ್ಯ ಪೂರ್ವ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆ ತನಿಖೆ ಮುಂದುವರೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net