

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳದು ಕೋಪ ಅತಿರೇಕಕ್ಕೆ ಹೋಗಿ ಯುವಕನೊಬ್ಬನಿಗೆ ಚಾಕು ಇರಿದಿರುವ ಘಟನೆ ಇಲ್ಲಿಯ ಹೊಸೂರಲ್ಲಿ ನಡೆದಿದೆ.
ಹೊಸೂರ ನಿವಾಸಿ ವಿಜಯ ಎಂಬುವವರಿಗೆ ಸಂದೀಪ ಎಂಬಾತ ಚಾಕು ಇರಿದು ಪರಾರಿಯಾಗಿದ್ದಾನೆ. ಗಾಯಗೊಂಡಿರುವ ವಿಜಯ ಅವರನ್ನು ಕೆಎಂಸಿಆರ್‌ಐನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.