ಚಾಕು ಇರಿದು ಯುವಕ ಕೊಲೆ

murder
Published on

ಮೈಸೂರು: ಅಗ್ರಹಾರದ 101 ಗಣಪತಿ ದೇವಸ್ಥಾನದ ಬಳಿ ಹಳೇ ದ್ವೇಷದ ಕಾರಣಕ್ಕೆ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದ ಯುವಕ ಸೋಮವಾರ ಮೃತಪಟ್ಟಿದ್ದಾನೆ.


ನಗರದ ಮೇದರಕೇರಿ ನಿವಾಸಿ, ಆಟೋ ಚಾಲಕ ಮಹೇಶ್ ಪುತ್ರ ಕುಮಾರ್(21)ಮೃತ ಯುವಕ.

ಭಾನುವಾರ ಈತನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ತಕ್ಷಣ ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯುವಕ ಕೊನೆಯುಸಿರೆಳೆದಿದ್ದಾನೆ.


ಮೃತರ ತಂದೆ ನೀಡಿದ ದೂರಿನ ಮೇರೆಗೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಕೈಗೊಂಡಿರುವ ಪೊಲೀಸರು, ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net