ರಕ್ತದಾನ ಮಾಡಲು ಮುಂದಾಗಿ

Kudlgi Blood donate
ಕೂಡ್ಲಿಗಿ ಪಟ್ಟಣದ ಶ್ರೀಮತಿ ಅಂಗಡಿ ವೀರಮ್ಮ ತಿರುಕಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಪ್ರಾಚಾರ್ಯ ಎನ್.ಕಲ್ಲಪ್ಪ, ಜಿಲ್ಲಾ ಏಡ್ಸ್ ನಿಯಂತ್ರಣ ಜಿಲ್ಲಾ ಮೇಲ್ವಿಚಾರಕ ಬಿ. ಗಿರೀಶ್, ಐಸಿಟಿಸಿ ಆಪ್ತ ಸಮಾಲೋಚಕ ಪ್ರಶಾಂತ ಕುಮಾರ್, ಉಪನ್ಯಾಸಕರಾದ ಗುರು ಬಸವರಾಜ, ಪಿ.ಉಮೇಶ್, ಭೀಮಲಿಂಗಪ್ಪ ಇದ್ದರು.
Published on

ಕೂಡ್ಲಿಗಿ: ಒಬ್ಬರು ರಕ್ತದಾನ ಮಾಡಿದರೆ ನಾಲ್ಕು ಜನರ ಜೀವ ಉಳಿಸಬಹುದು ಎಂದು ಟಿಎಚ್‌ಒ ಡಾ.ಎಸ್.ಪಿ.ಪ್ರದೀಪ್ ಕುಮಾರ್ ಹೇಳಿದರು.

ಪಟ್ಟಣದ ಶ್ರೀಮತಿ ಅಂಗಡಿ ವೀರಮ್ಮ ತಿರುಕಪ್ಪ (ಎಸ್‌ಎವಿಟಿ) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ತಾಲೂಕು ಆಸ್ಪತ್ರೆ, ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಹಾಗೂ ರಾಜ್ಯ ರಕ್ತ ಚಾಲಕ ಪರಿಷತ್, ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ರಕ್ತ ನಿಧಿ ಘಟಕ ಹಾಗೂ ಎನ್ನೆಸ್ಸೆಸ್ ಘಟಕದಿಂದ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

ರಕ್ತದಾನ ಮಾಡುವುದರಿಂದ ಜೀವ ಉಳಿಸಿದ ಸಾರ್ಥಕತೆ ಸಿಗಲಿದೆ. ಆದ್ದರಿಂದ ಯುವಕ, ಯುವತಿಯರು ರಕ್ತದಾನ ಮಾಡಲು ಮುಂದಾಗಬೇಕು ಎಂದರು. 10 ವಿದ್ಯಾರ್ಥಿನಿಯರು ಸೇರಿದಂತೆ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

ಪ್ರಾಚಾರ್ಯ ಎನ್.ಕಲ್ಲಪ್ಪ, ಜಿಲ್ಲಾ ಏಡ್ಸ್ ನಿಯಂತ್ರಣ ಜಿಲ್ಲಾ ಮೇಲ್ವಿಚಾರಕ ಬಿ.ಗಿರೀಶ್, ಐಸಿಟಿಸಿ ಆಪ್ತ ಸಮಾಲೋಚಕ ಪ್ರಶಾಂತ ಕುಮಾರ್, ಉಪನ್ಯಾಸಕರಾದ ಗುರು ಬಸವರಾಜ, ಪಿ.ಉಮೇಶ್, ಭೀಮಲಿಂಗಪ್ಪ, ಇಂದಿರಾ, ಆರ್‌ಕೆಎಸ್‌ಕೆ ಆಪ್ತ ಸಮಾಲೋಚಕ ಓಬಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net