ಪ್ರಕೃತಿ ಉಳಿವಿಗೆ ಯುವಜನರು ಕಾರ್ಯೋನ್ಮುಖರಾಗಿ

sid
Published on

ವಿಜಯವಾಣಿ ಸುದ್ದಿಜಾಲ ಬೆಳ್ವೆ

ಪ್ರಕೃತಿ ಉಳಿಯಬೇಕಾದರೆ ಹೆಚ್ಚು ಸಂಖ್ಯೆಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸಬೇಕು. ಈ ನಿಟ್ಟಿನಲ್ಲಿ ಯುವಜನರು, ವಿದ್ಯಾರ್ಥಿಗಳು ಕಾರ್ಯೋನ್ಮುಖರಾಗಬೇಕು ಎಂದು ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ ಹೇಳಿದರು.

ಬೆಳ್ವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ಸಹಕಾರ ಇಲಾಖೆ, ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ ಸಹಸ್ರ ಗಿಡ ನೆಡುವ ಸಂಕಲ್ಪ, ಹಸಿರು ಪರಿಸರ ನಿರ್ಮಿಸುವ ಕಾಯಕಲ್ಪ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ, ಬಳಿಕ ಹಣ್ಣಿನ ಸಸಿಗಳನ್ನು ವಿತರಿಸಿ ಮಾತನಾಡಿದರು.

ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಬಿ.ಹರೀಶ್ ಕಿಣಿ ಬೆಳ್ವೆ, ಉದಯ ಶೆಟ್ಟಿ ಶೇಡಿಮನೆ, ದಯಾನಂದ ಆರ್.ಶೆಟ್ಟಿ, ಕೃಷ್ಣ ನಾಯ್ಕ ಸೆಟ್ಟೋಳಿ, ಅಣ್ಣಯ್ಯ ಶೆಟ್ಟಿ ಕಮ್ಗೋಳಿ, ಕೆ.ಸಂಜೀವ ಆರ್ಡಿ, ಶಂಕರ ಶೆಟ್ಟಿ ಬೆಳ್ವೆ, ಸದಸ್ಯರು ಹಾಗೂ ಶಿಕ್ಷಕರು ಇದ್ದರು. ಮುಖ್ಯಶಿಕ್ಷಕಿ ಜಯಶ್ರೀ ಸ್ವಾಗತಿಸಿದರು. ಕಿಶನ್‌ರಾಜ್ ಶೆಟ್ಟಿ ವಂದಿಸಿದರು. ಕೀರ್ತಿಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net