ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ಯುವಕರು

Published on

ನಾಲತವಾಡ: ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ.ಹೀಗಾಗಿ ರಕ್ತದ ಅವಶ್ಯಕತೆ ಇರುವವರು ದಾನಿಗಳ ಮೇಲೆ ಅವಲಂಬಿತರಾಗಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪಟ್ಟಣದ ಯುವಕರು ಸ್ವಯಂ ಪ್ರೇರಿತರಾಗಿ ಶನಿವಾರ ಬಾಗಲಕೋಟದ ಎಸ್​. ನಿಜಲಿಂಗಪ್ಪ ಮೆಡಿಕಲ್​ ಕಾಲೇಜಿನ ರಕ್ತನಿಧಿ ಕೇಂದ್ರಕ್ಕೆ ತೆರಳಿ ರಕ್ತದಾನ ಮಾಡಿದರು.

ವಿಜಯವಾಣಿಯೊಂದಿಗೆ ಮಾತನಾಡಿದ ಯುವಕರು ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸುರತ ರಕ್ತದ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ರಕ್ತದಾನದ ಮುಖ್ಯ ಉದ್ದೇಶವಾಗಿದೆ. ಅಪಘಾತ, ಶಸ್ತ್ರಚಿಕಿತ್ಸೆ, ಹೆರಿಗೆ ಮತ್ತು ಕೆಲವು ಕಾಯಿಲೆಗಳಿಂದ ಬಳಲುತ್ತಿರುವವರ ಜೀವ ಉಳಿಸಿದ ಪುಣ್ಯ ನಮಗೆ ತಟ್ಟುತ್ತದೆ ಎಂಬ ಆತ್ಮವಿಶ್ವಾಸ ನಮಗಿದೆ. ಇತರರಿಗೂ ಸಹ ಇದು ಪ್ರೇರಣೆಯಾದರೆ ಅದಕ್ಕಿಂತ ದೊಡ್ಡ ಸಂತೋಷ ಮತ್ತೊಂದಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net