ಹೊಟ್ಟೆನೋವು ತಾಳದೆ ಯುವತಿ ಆತ್ಮಹತ್ಯೆ

1-pnp 6 gowtami
Published on

ಪಾಂಡವಪುರ: ತಾಲೂಕಿನ ಕಣಿವೆಕೊಪ್ಪಲು ಗ್ರಾಮದಲ್ಲಿ ಹೊಟ್ಟೆನೋವು ತಾಳಲಾರದೆ ಯುವತಿ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಗ್ರಾಮದ ನಿವಾಸಿ ಟಿಎಪಿಸಿಎಂಎಸ್ ನಿರ್ದೇಶಕ, ವಕೀಲ ಕಣಿವೆಯೋಗೇಶ್ ಅವರ ಪುತ್ರಿ ಗೌತಮಿ(21) ಮೃತ ಯುವತಿ. ಯುವತಿಗೆ ಹಾಗಾಗ್ಗೆ ಹೊಟ್ಟೆನೋವು ಬಾಧಿಸುತ್ತಿತ್ತು ಎನ್ನಲಾಗಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಕಡಿಮೆಯಾಗದ ಹಿನ್ನೆಲೆಯಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಟ್ಟಣದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಜಿಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಿ.ಅಶೋಕ್, ಲಾರಿ ಮಾಲೀಕರ ಸಂಘದ ಅಧ್ಯಕ್ಷ ಸಿ.ಶಿವಕುಮಾರ್ ಸೇರಿದಂತೆ ಅನೇಕರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net