

ಕೊಕ್ಕಡ: ಶಿಶಿಲ ಗ್ರಾಮದ ಪೇರಿಕೆ ನಿವಾಸಿ ಸುಪ್ರೀತಾ (16) ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಪೇರಿಕೆಯ ಕೃಷ್ಣಪ್ಪ ಮಲೆಕುಡಿಯ ಮತ್ತು ಸುನಂದಾ ದಂಪತಿಯ ಪುತ್ರಿಯಾಗಿರುವ ಸುಪ್ರಿತಾ ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದಿದ್ದರು.ಮಂಗಳವಾರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಲಿಲ್ಲ. ತಂದೆ, ತಾಯಿಯನ್ನು ಅಗಲಿದ್ದಾರೆ.