

ಬೆಳ್ತಂಗಡಿ : ಸ್ಟೇ ವೈಯರ್ಗೆ ವಿದ್ಯುತ್ ಸ್ಪರ್ಶಿಸಿ ಯುವತಿಯೊಬ್ಬರು ಮೃತರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (20) ಮೃತ ದುರ್ದೈವಿ. ಪಾರ್ಸೆಲ್ ಬಂತೆಂದು ರಸ್ತೆಗೆ ಬಂದಾಗ ರಸ್ತೆಯಲ್ಲಿ ಹರಿಯುತ್ತಿದ್ದ ನೀರಿನಲ್ಲಿ ವಿದ್ಯುತ್ ಪ್ರವಹಿಸಿ ಈ ದುರ್ಘಟನೆ ಸಂಭವಿಸಿದೆ. ಮೃತ ಯುವತಿ ಕೊಕ್ಕಡ ಮೆಡಿಕಲ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದರು. ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿಯ ಮೂವರು ಮಕ್ಕಳಲ್ಲಿ ಈಕೆ ಮೊದಲನೆಯವರು. ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ತಹಸೀಲ್ದಾರ್ ಪೃಥ್ವಿ ಸಾನಿಕಂ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.