

ಉಡುಪಿ: ಕೆಸ್ತ ಧರ್ಮಕ್ಕೆ ಸೇರಿದ ಇಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಮುಸ್ಲಿಂ ಯುವಕ ಅಪಹರಿಸಿ ಮದುವೆಯಾಗಿದ್ದಾನೆ. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರೂ ಪೋಲಿಸರು ಯಾವುದೇ ಕ್ರಮಕೈಗೊಂಡಿಲ್ಲ. ಆರೋಪಿಯನ್ನು ಪತ್ತೆಹಚ್ಚಿ ಮಗಳನ್ನು ನಮ್ಮ ಮುಂದೆ ಹಾಜರುಪಡಿಸುವಲ್ಲಿ ವಿಲರಾಗಿದ್ದಾರೆ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ತಾಯಿ ಮೇರುಸ್ ಪುಷ್ಪಲತಾ, ಕರಂಬಳ್ಳಿ ನಿವಾಸಿ ಅಕ್ರಮ್ ಎಂಬಾತ ಮಗಳನ್ನು ಇನ್ಸ್ಸ್ಟಾಗ್ರಾಂನಲ್ಲಿ ಪರಿಚಯಿಸಿಕೊಂಡು ಆಕೆಯ ಸ್ನೇಹ ಸಂಪಾದಿಸಿ, ಬ್ಲಾಕ್ಮೇಲ್ ಮಾಡಿ ಮಾ. 20ರಂದು ಕಾಲೇಜಿನಿಂದ ವಾಪಸು ಮನೆಗೆ ತೆರಳುವಾಗ ಅಪಹರಿಸಿದ್ದಾನೆ. 4 ವರ್ಷದ ಹಿಂದೆ ಅಕ್ರಮ್ ಮೊಹಮ್ಮದ್ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು ನೀಡಲಾಗಿತ್ತು. ಈ ಸೇಡು ತೀರಿಸಿಕೊಳ್ಳಲು ಅಕ್ರಮ್ ಮೊಹಮ್ಮದ್ ನನ್ನ ಮಗಳನ್ನು ಅಪಹರಿಸಿ, ಆಶ್ಲೀಲ ಚಿತ್ರಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ವಿವಾಹ ನೊಂದಣಿಗೆ ಸಹಿ ಹಾಕಿಸಿದ್ದಾನೆ ಎಂದು ದೂರಿದ್ದಾರೆ.
ಹೈಕೋರ್ಟ್ನಲ್ಲಿ ಹೆಬಿಯಸ್ ಕಾರ್ಪಸ್
ಉಡುಪಿ ಉಪನೋಂದಣಿ ಕಚೇರಿಯಲ್ಲಿ ಅಕ್ರಮ್ ವಿವಾಹ ನೋಂದಣಿ ಅರ್ಜಿ ಸಲ್ಲಿಸಿದ ವಿಚಾರ ನಮ್ಮ ಗಮನಕ್ಕೆ ಬಂದಾಗ ದಿಕ್ಕು ತೋಚದಂತಾಗಿದೆ. ಈ ಬಗ್ಗೆ ಜಿಲ್ಲಾ ಎಸ್ಪಿಯವರನ್ನು ಭೇಟಿ ಮಾಡಿದ್ದು, ನಮ್ಮನ್ನು ಕೂರಿಸಿ ಚೆನ್ನಾಗಿ ಮಾತನಾಡಿದ್ದಾರೆ. ಆದರೆ ಕಾನೂನಿನಂತೆ ಏನು ಸಹಾಯ ಮಾಡಲು ಸಾಧ್ಯವಿಲ್ಲ ಎಂದು ಕೈ ತೊಳೆದುಕೊಂಡಿದ್ದಾರೆ. ಹೀಗಾಗಿ ಮಗಳನ್ನು ನಮ್ಮ ಮುಂದೆ ಹಾಜರು ಪಡಿಸುವಂತೆ ಹೈಕೋರ್ಟ್ನಲ್ಲಿ ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದೇವೆ ಎಂದರು. ಯುವತಿ ತಂದೆ ಗಾಡ್ವಿನ್ ದೇವದಾಸ್ ಉಪಸ್ಥಿತರಿದ್ದರು.
ಎ.4ಕ್ಕೆ ಯುವತಿಯನ್ನು ಹಾಜರುಪಡಿಸಲು ಸೂಚನೆ
ಮಾ.28 ರಂದು ಯುವತಿಯ ತಂದೆ ತನ್ನ ಮಗಳನ್ನು ಹುಡುಕಿಕೊಡುವಂತೆ ಹೈಕೋರ್ಟ್ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿಯನ್ನು ಪುರಸ್ಕರಿಸಿದ ನ್ಯಾ. ಕಾಮೇಶ್ವರ್ ರಾವ್ ಹಾಗೂ ನ್ಯಾ.ನದಾಫ್ ಅವರಿದ್ದ ವಿಭಾಗೀಯ ಪೀಠವು ಎ.4 ರಂದು ಯುವತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ನಿರ್ದೇಶಿಸಿದೆ.