

ಹಾವೇರಿ: ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೋಸ ಹೋದ ಯುವತಿ ಪ್ರೀತಿಸಿದ ಯುವಕ ಹಾಗೂ ಆತನ ಕುಟುಂಬದವರ ವಿರುದ್ಧ ಇಲ್ಲಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಿಸಿದ್ದಾಳೆ.
ಇಲ್ಲಿಯ ಬಸವೇಶ್ವರ ನಗರದ ಕಿರಣ ರೇವಣಪ್ಪ ತೋಟದ ಹಾಗೂ ಈತನ ಕುಟುಂಬದವರ ವಿರುದ್ಧ ಪ್ರಕರಣ ದಾಖಲಾಗಿದೆ.
ಇವರ ವಿರುದ್ಧ ದೂರು ನೀಡಿರುವ ಯುವತಿ, ರಾಣೆಬೆನ್ನೂರಿನ ಇಂಜಿನಿಯರಿಂಗ್ ಕಾಲೇಜ್ನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲಿ ಕಿರಣ ನನ್ನೊಂದಿಗೆ ಪ್ರೀತಿ ಮಾಡುವ ನಾಟಕವಾಗಿ ಮದುವೆ ಮಾಡಿಕೊಳ್ಳುವುದಾಗಿ ಹೇಳಿದ್ದ. ಅಲ್ಲದೆ ನನ್ನ ಮೇಲೆ ಅತ್ಯಾಚಾರ ಕೂಡ ಎಸಗಿದ್ದಾನೆ. ಅವರ ಕುಟುಂಬದವರು ಆರಂಭದಲ್ಲಿ ನಮ್ಮ ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ಆದರೀಗ ಮದುವೆ ಮಾಡಿಕೊಳ್ಳಲು ನಿರಾಕರಿಸಿ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.