ಮರಳಿ ಬಾರದ ಹುಬ್ಬಳ್ಳಿಗೆ ಹೊರಟ ಯುವತಿ

Missing-lady
Published on

ಕಾರವಾರ: ಉದ್ಯೋಗಕ್ಕೆ ಹೋಗಿ ಬರುವುದಾಗಿ ಹೇಳಿದ ಯುವತಿ ನಾಪತ್ತೆಯಾದ ಬಗ್ಗೆ ಯಲ್ಲಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಯಲ್ಲಾಪುರ ಠಾಣೆ ಪೊಲೀಸರು ಆಕೆ ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಕೋರಿದ್ದಾರೆ.

ಚಂದಗುಳಿಯ ದೇಸಾಯಿಮನೆಯ 26ವರ್ಷದ ಯುವತಿ ತೇಜಾ ರಾಮಕೃಷ್ಣ ಭಟ್ 2023 ರ ಡಿಸೆಂಬರ್‌ 20 ರಂದು ಬೆಳಗ್ಗೆ 9.30 ಗಂಟೆಗೆ ತಾನು ಕೆಲಸ ಮಾಡುತ್ತಿದ್ದ ಹುಬ್ಬಳ್ಳಿ ಕಂಪನಿಗೆ ಹೋಗುವುದಾಗಿ ಹೇಳಿ ಯಲ್ಲಾಪುರ ಬಸ್ ನಿಲ್ದಾಣದಿಂದ ಹೋದವಳು, ಕೆಲಸ ಮಾಡುತ್ತಿದ್ದ ಸ್ಥಳಕ್ಕೂ ಹೋಗದೇ ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೇ ಎಲ್ಲಿಗೋ ಹೋಗಿ ಕಾಣೆಯಾಗಿರುತ್ತಾಳೆ ಎಂದು ಸಂಬಂಧಿಕರು ದೂರು ನೀಡಿದ್ದಾರೆ.
ದುಂಡನೆಯ ಮುಖ, ಕಪ್ಪು ಕೂದಲು, ಗೋಧಿ ಮೈ ಬಣ್ಣ, 5.2 ಅಡಿ ಎತ್ತರ, ಕನ್ನಡ, ಇಂಗ್ಲೀಷ್ ಭಾಷೆ ಮಾತನಾಡುತ್ತಾಳೆ. ಹಳದಿ ಬಣ್ಣದ ಚೂಡಿದಾರ ಧರಿಸಿದ್ದಾಳೆ. ಇವರು ಸಾರ್ವಜನಿಕರಿಗೆ ಕಂಡು ಬಂದಲ್ಲಿ ಯಲ್ಲಾಪುರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08419-261133, ಯಲ್ಲಾಪುರ ಪೊಲೀಸ್ ನಿರೀಕ್ಷಕರ ದೂ. ಸಂ: 9480805757 ಹಾಗೂ ಪಿ.ಎಸ್.ಐ ದೂ.ಸಂ: 9480805273 ನ್ನು ಸಂಪರ್ಕಿಸುವAತೆ ಯಲ್ಲಾಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಸಿಲಿಂಡರ್‌ ಸ್ಫೋಟ-5 ಮನೆಗಳಿಗೆ ಬೆಂಕಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net