ಹೊಟ್ಟೆನೋವು ತಾಳಲಾರದ ಆತ್ಮಹತ್ಯೆಗೆ ಶರಣಾದ ಯುವತಿ

Crime Logo
Published on

ಶಿಗ್ಗಾಂವಿ: ಹೊಟ್ಟೆನೋವು ತಾಳಲಾರದೆ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಿರೇಬೆಂಡಿಕೇರಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಅಶ್ವಿನಿ ಅರ್ಜುನಪ್ಪ ಬಾವಿಕಟ್ಟಿ (17) ಮೃತ ಯುವತಿ.

ಈಕೆ 2 ವರ್ಷದಿಂದ ಹೊಟ್ಟೆ ನೋವು ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಳು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಬೇಸತ್ತು ಮನೆಯಲ್ಲಿಯೆ ನೇಣು ಬಿಗಿದುಕೊಂಡಿದ್ದಾಳೆ. ಈ ಕುರಿತು ಹುಲಗೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net