ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳುವತ್ತ ಯುವ ಜನರು ಗಮನಹರಿಸಬೇಕು

youth
Published on

ಮಡಿಕೇರಿ:

ಸ್ವಾಮಿ ವಿವೇಕಾನಂದ ಅವರಂತೆ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳುವತ್ತ ಯುವ ಜನರು ಗಮನಹರಿಸಬೇಕು ಎಂದು ಜಾನಪದ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ.ಅನಂತಶಯನ ಹೇಳಿದರು. ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಸೋಮವಾರ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ನಡೆದ ರಾಷ್ಟಿçÃಯ ಯುವ ದಿನ ಹಾಗೂ ಯುವ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರAತೆ ಜೀವನದಲ್ಲಿ ಉದ್ದೇಶ ಮತ್ತು ಗುರಿ ಹೊಂದಿರಬೇಕು. ಭಾರತವು ಇಡೀ ವಿಶ್ವದಲ್ಲಿ ತಾಯಿ ಇದ್ದಂತೆ. ಆಧ್ಯಾತ್ಮಿಕತೆಯಲ್ಲಿ ಸ್ವಾಮಿ ವಿವೇಕಾನಂದರು ವಿಶ್ವ ಪರ್ಯಟನೆ ಮಾಡಿ ಅಮೇರಿಕಾದ ಚಿಕಾಗೋದಲ್ಲಿ ನಡೆದ ಸಮ್ಮೇಳನದಲ್ಲಿ ಸಹೋದರ, ಸಹೋದರಿಯರೆ ಎಂದು ಉಚ್ಛರಿಸಿ ಇಡೀ ವಿಶ್ವಕ್ಕೆ ಒಳ್ಳೆಯ ಸಂದೇಶ ನೀಡಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಹತ್ತಿರದವರನ್ನು ಸಹ ಸಹೋದರ, ಸಹೋದರಿ ಎಂದು ಹೇಳಲು ಹಿಂಜರಿಯುತ್ತಾರೆ. ಅಂತದರಲ್ಲಿ ಸ್ವಾಮಿ ವಿವೇಕಾನಂದರು ವಿಶಾಲ ಮನೋಭಾವದಿಂದ ಎಲ್ಲರನ್ನು ಸಹೋದರ, ಸಹೋದರಿಯರು ಎಂದು ಸಂಭೋಧಿಸುವ ಮೂಲಕ ಭಾರತೀಯ ಸಂಸ್ಕೃತಿ, ಸಂಸ್ಕಾರವನ್ನು ಇಡೀ ಜಗತ್ತಿಗೆ ಪರಿಚಯಿಸಿದರು ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಮಾತನಾಡಿ ವಿದ್ಯಾರ್ಥಿಗಳು ಪ್ರಥಮ ಆದ್ಯತೆಯಲ್ಲಿ ಪಠ್ಯಪುಸ್ತಕ ಅಧ್ಯಯನ ಮಾಡುವಂತಾಗೇಕು. ಸ್ವಾಮಿ ವಿವೇಕಾನಂದರ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರ ವಿಚಾರಧಾರೆ ತಿಳಿದುಕೊಳ್ಳುವಂತಾಗಬೇಕು. ರಾಷ್ಟçದಲ್ಲಿ ಯುವ ಜನರ ಸಂಖ್ಯೆ ಹೆಚ್ಚಿದ್ದು, ಯುವಜನರು ತಮ್ಮ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು. ತಮ್ಮ ಕುಟುಂಬ ಚೆನ್ನಾಗಿದ್ದರೆ ಸಮಾಜ ಚೆನ್ನಾಗಿರುತ್ತದೆ. ಸಮಾಜ ಚೆನ್ನಾಗಿದ್ದಲ್ಲಿ ರಾಷ್ಟç ಅಭಿವೃದ್ಧಿಯತ್ತ ಸಾಗುತ್ತದೆ. ಆ ನಿಟ್ಟಿನಲ್ಲಿ ಯುವಜನರು ಯೋಚಿಸಬೇಕು ಎಂದು ಹೇಳಿದರು.

ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲ ವಿಜಯ್ ಮಾತನಾಡಿದರು.

ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಹಿರಿಯ ಉಪನ್ಯಾಸಕ ಚಿದಾನಂದ, ಮಡಿಕೇರಿ ತಾಲೂಕು ಯುವ ಒಕ್ಕೂಟದ ಅಧ್ಯಕ್ಷರಾದ ಬಾಳಾಡಿ ದಿಲೀಪ್ ಕುಮಾರ್, ಯುವ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಪಿ.ಸುಕುಮಾರ್, ಯುವ ಒಕ್ಕೂಟದ ಸದಸ್ಯರಾದ ಸಾಬಾ ಸುಬ್ರಮಣಿ, ನವೀನ್ ದೇರಳ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net