

ಹೊಸಕೋಟೆ: ಕೆಲ ದಿನಗಳ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಮೈಲಾಪುರದಲ್ಲಿ ನಡೆದಿದ್ದ ಕೊಲೆ ಪ್ರಕರಣ ಮಾಸುವ ಮುನ್ನ ಅವೇ ರೀತಿಯ ಘಟನೆಯೊಂದು ಗಡಿಭಾಗವಾದ ರಾಮಸಂದ್ರ-ಗಂಗಾಪುರದ ಬಳಿ ನಡೆದಿದ್ದು, ಜನರನ್ನು ಬೆಚ್ಚಿಬೀಳಿಸಿದೆ.
ಸಿನಿಮೀಯ ಶೈಲಿಯಲ್ಲಿ ಕಾರಿಗೆ ಡಿಕ್ಕಿ ಹೊಡೆದು ಹತ್ಯೆ ಮಾಡಲಾಗಿದ್ದು, ಮೃತನನ್ನು ಕೋಲಾರ ಜಿಲ್ಲೆಯ ನಿವಾಸಿ ಭಾರ್ಗವ್ (24) ಎಂದು ಗುರುತಿಸಲಾಗಿದೆ.
ಶನಿವಾರ ತಡರಾತ್ರಿ 11:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಕಾರನ್ನು ಸುಮಾರಿ ದೂರದಿಂದ ಚೇಸ್ ಮಾಡಿಕೊಂಡು ಬಂದು ಅಡ್ಡಗಟ್ಟಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ನಂದಗುಡಿ ಪೊಲೀಸ್ ಠಾಣೆ ವ್ಯಾಪ್ರಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.