ಟ್ರೆಕ್ಕಿಂಗ್​​ಗೆ ತೆರಳಿ ಅಪಾಯಕ್ಕೆ ಸಿಲುಕಿದ ಯುವಕ; ರಕ್ಷಣೆಗಾಗಿ ಹರಸಾಹಸ

Trecking
Published on

ಚಿಕ್ಕಬಳ್ಳಾಪುರ: ಕೆಲವೇ ದಿನಗಳ ಹಿಂದೆ ಕೇರಳದ ದುರ್ಗಮ ಪ್ರದೇಶದಲ್ಲಿ ಸಿಲುಕಿದ್ದ ಯುವಕನೊಬ್ಬನನ್ನು ಭಾರತೀಯ ಸೇನೆಯ ಯೋಧರು ರಕ್ಷಿಸಿದ್ದನ್ನು ಕೇಳಿದ್ದೀರಿ, ನೋಡಿದ್ದೀರಿ. ಅಂಥದ್ದೇ ಒಂದು ಪ್ರಸಂಗ ಈಗ ಕರ್ನಾಟಕದಲ್ಲಿ ಎದುರಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದ ಪ್ರವಾಸಿಗನೊಬ್ಬ ದುರ್ಗಮ ಪ್ರದೇಶದಲ್ಲಿ ಸಿಲುಕಿದ್ದು ಅಪಾಯದಲ್ಲಿದ್ದಾನೆ. ದೆಹಲಿ ಮೂಲದ ನಿಶಾಂತ್ ಅಪಾಯಕ್ಕೆ ಸಿಲುಕಿದ ವ್ಯಕ್ತಿ.

ನಂದಿಬೆಟ್ಟ ವಿಕೇಂಡ್ ಬಂದ್ ಹಿನ್ನಲೆಯಲ್ಲಿ ಇವರು ಬ್ರಹ್ಮಗಿರಿ ಬೆಟ್ಟದ ಟ್ರೆಕ್ಕಿಂಗ್ ಮಾಡಲು ಮುಂದಾಗಿದ್ದಾರೆ. ಆಗ ಬೆಟ್ಟದಲ್ಲಿ ಕಾಲು ಜಾರಿ ಬಿದ್ದು ದುರ್ಗಮ ಪ್ರದೇಶದಲ್ಲಿ ಹೋಗಿ ಸಿಲುಕಿಕೊಂಡಿದ್ದಾನೆ. ಸಹಾಯಕ್ಕಾಗಿ ಸರ್ಕಾರದ ಕಂಟ್ರೋಲ್ ರೂಮ್​ಗೆ ಈತ ಕರೆ ಮಾಡಿದ್ದು, ಪೊಲೀಸರು ಮತ್ತು ಅಗ್ನಿಶಾಮಕದಳ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net