ಲವ್ ಫೇಲ್ಯೂರ್ ಆಗಿದ್ದಕ್ಕೆ ಹದಿಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ!

crime
Published on

ಬೆಂಗಳೂರು: ಪ್ರೇಮ ವೈಫಲ್ಯದ ಕಾರಣಕ್ಕೆ ಯುವಕನೊಬ್ಬ ಹದಿಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜಧಾನಿ ಬೆಂಗಳೂರಿನಲ್ಲಿ ಇಂಥದ್ದೊಂದು ದುರಂತ ಸಂಭವಿಸಿದೆ.

ರಿತೀಕ್​ (21) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡವ. ಬೆಂಗಳೂರಿನ ಸಂಪಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾನ್ಯತಾ ಟೆಕ್ ಪಾರ್ಕ್ ಒಳಗೆ ಈ ದುರ್ಘಟನೆ ನಡೆದಿದೆ. ಬಿಹಾರ ಮೂಲದ ಈ ಯುವಕ ಇಲ್ಲಿ ಇಂಟೀರಿಯರ್ ಡೆಕೋರೇಷನ್​ಗೆ ಸಂಬಂಧಿಸಿದಂತೆ ಕೆಲಸದಲ್ಲಿದ್ದ.

ಇಂದು ಮಾನ್ಯತಾ ಟೆಕ್​ ಪಾರ್ಕ್​ನಲ್ಲಿ ಕೆಲಸ ಮಾಡುತ್ತಿದ್ದ ರಿತೀಕ್, 13ನೇ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ಸ್ಥಳಕ್ಕೆ ಸಂಪಿಗೇಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಲವ್​ ಫೇಲ್ಯೂರ್ ಕಾರಣ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ. ಮತ್ತಷ್ಟು ತನಿಖೆ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net