ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ನೇಣಿಗೆ ಶರಣಾದ ಯುವಕ

Charger Death
Published on

ತುಮಕೂರು: ಮೊಬೈಲ್​ ಚಾರ್ಜರ್​ ಕೊಡಲಿಲ್ಲವೆಂಬ ಕಾರಣಕ್ಕೆ ಮನನೊಂದು ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕುರು ಜಿಲ್ಲೆ ಪಾವಗಢ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿ ಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಆಶಾ ಕಾರ್ಯಕರ್ತೆ ವರಲಕ್ಷ್ಮಮ್ಮ ಎಂಬುವವರ ಪುತ್ರ ನಿಖಿಲ್ ಗೌಡ (18) ಆತ್ಮಹತ್ಯೆಗೆ ಶರಣಾದ ಯುವಕ ಎಂದು ತಿಳಿದು ಬಂದಿದ್ದು, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಭಾನುವಾರ ರಜೆ ಇದ್ದ ಕಾರಣ ನಿಖಿಲ್​ ತನ್ನ ತಾಯಿಯ ಜೊತೆ ಮಾತನಾಡುವ ವೇಳೆ ನನಗೆ ಏನು ಕೊಡಿಸಿಲ್ಲ ಎಂದು ಗಲಾಟೆ ಮಾಡಿದ್ದಾನೆ. ಬಳಿಕ ಮೊಬೈಲ್​ ಚಾರ್ಜರ್​ ಕೊಡುವಂತೆ ಹೇಳಿದ್ದಾನೆ. ಆಗ ಅವರ ತಾಯಿ ನನ್ನ ಬಳಿ ಚಾರ್ಜರ್ ಇಲ್ಲವೆಂದು ಹೇಳಿ ನೆರೆ ಮನೆಗೆ ಹೂ ಕಟ್ಟಲೆಂದು ಹೋಗಿದ್ದಾರೆ.

Charger Death

ಸ್ವಲ್ಪ ಹೊತ್ತಿನ ಬಳಿಕ ಬಂದು ಮನೆಯ ಬಾಗಿಲು ಬಡಿದಾಗ ಒಳಗಿದ್ದ ನಿಖಿಲ್​ ಪ್ರತಿಕ್ರಿಯಿಸದೆ ಇದ್ದಾಗ ಗಾಬರಿಗೊಂಡ ಅವರ ತಾಯಿ ನೆರೆಹೊರೆಯವರನ್ನು ಕರೆದಿದ್ದಾರೆ. ಅವರ ಮನೆಯ ಬಾಗಿಲು ಮುರಿದು ಪರಿಶೀಲಿಸಿದಾಗ ನಿಖಿಲ್​ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ವೈ.ಎನ್​.ಹೊಸಕೋಟೆ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮೃತ ನಿಖಿಲ್​ ಗೌಡನ ತಾಯಿ ವರಲಕ್ಷ್ಮಮ್ಮನವರ ಹೇಳಿಕೆ ಪಡೆದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net