ಯುವ ಸಮುದಾಯ ಜನಪದ ಕಲೆ ಉಳಿಸಬೇಕು : ಗಾಯಕ ಡಾ.ಅಪ್ಪಗೆರೆ ತಿಮ್ಮರಾಜು

123
Published on

ಮೈಸೂರು: ಯುವ ಸಮುದಾಯ ಜನಪದ ಕಲೆಗಳನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು ಎಂದು ಗಾಯಕ ಡಾ.ಅಪ್ಪಗೆರೆ ತಿಮ್ಮರಾಜು ಕರೆ ನೀಡಿದರು.

ಗೌತಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸೇವಾ ಟ್ರಸ್ಟ್ ವತಿಯಿಂದ ರಂಗಾಯಣದ ಬಿ.ವಿ. ಕಾರಂತ ರಂಗ ಚಾವಡಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜನಪದ ಕಲಾ ಪ್ರಕಾರಗಳ ಉಚಿತ ತರಬೇತಿ ಶಿಬಿರವನ್ನು ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಯುವ ಸಮುದಾಯಕ್ಕೆ ಜನಪದ ಕಲೆಗಳನ್ನು ಪರಿಚಯಿಸಲು ಇಂತಹ ಶಿಬಿರಗಳ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.

ಯುವ ಸಮುದಾಯ ಜನಪದದ ಮಹತ್ವ ಅರಿತುಕೊಳ್ಳಬೇಕು. ಜರ್ಮನಿಯ ಗಿಟಾರ್‌ಅನ್ನು ವಿಶ್ವದ ಎಲ್ಲರು ಬಳಸುತ್ತಾರೆ. ಅದೇ ರೀತಿ ನಮ್ಮ ಯುವ ಸಮುದಾಯ ಸಹ ಬಳಸುತ್ತಿದ್ದಾರೆ. ಇದರ ಜತೆಗೆ ನಮ್ಮ ದೇಶದ ಏಕತಾರಿಯನ್ನು ಸಹ ಬಳಸುವಂತೆ ಆಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಡಾ. ಉಮೇಶ್, ಮಹಾರಾಜ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾ ಅಧಿಕಾರಿ ಡಾ.ಎಸ್. ಕೃಷ್ಣಪ್ಪ, ಗೌತಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣಮೂರ್ತಿ ತಲಕಾಡು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net