ಹಿರೀಸಾವೆ : ರಾಜ್ಯದಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಯುವ ಘಟಕ ಶ್ರಮಿಸಲಿದೆ ಎಂದು ಪಕ್ಷದಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಾಂಕ್ ಗೋಪಾಲಸ್ವಾಮಿ ಹೇಳಿದರು.ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ರಾಜ್ಯ ಯುವಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ತೆರಳುವ ಮಾರ್ಗದಲ್ಲಿ ಕಿರೀಸಾವೆ ಗಡಿ ಆಂಜನೇಯ ದೇವಾಲಯದ ಮುಂಭಾಗ ಜಿಲ್ಲೆಯ 7 ವಿಧಾನ ಸಭಾ ಕ್ಷೇತ್ರದ ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಯುವಜನರ ಸಂಘಟನೆಗೆ ಆದ್ಯತೆ ನೀಡಲಾಗುವುದು. ನೂತನ ಪದಾಧಿಕಾರಿಗಳು ಈ ನಿಟ್ಟಿನಲ್ಲಿ ಗಮನ ನೀಡಲಿದ್ದಾರೆ ಎಂದರು. ಕೆಪಿಸಿಸಿ ಚುಕ್ಕಾಣಿ ಹಿಡಿದಿರುವ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ ನಾಡಿನ ಆಶಾಕಿರಣವಾಗಿದ್ದಾರೆ ಎಂದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಂಜಿತ್ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ಒಂದು ಕುಟುಂಬಕ್ಕೆ ಸೀಮಿತವಾಗಿದ್ದ ಅಧಿಕಾರನ್ನು ಬದಲಿಸುವಲ್ಲಿ ಕಳೆದ ಲೋಕಸಭೆ ಚುನಾವಣೆ ಸಾಕ್ಷಿಯಾಗಿದೆ. ಮುಂದೆ ಬರಲಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಯುವ ಜನರು ಕಣಕ್ಕೆ ಇಳಿದು ಕಾಂಗ್ರೆಸ್ ಬಾವುಟವನ್ನು ಜಿಲ್ಲಾದ್ಯಂತ ಹಾರಿಸುವಂತೆ ಮಾಡಬೇಕು ಎಂದರು.
ಶ್ರವಣಬೆಳಗೊಳ ಕ್ಷೇತ್ರದ ಕಾಂಗ್ರೆಸ್ ಅಧ್ಯಕ್ಷ ಅವ್ವೇರಹಳ್ಳಿ ವೇಣು ಮಾತನಾಡಿ, ರಾಜ್ಯದಲ್ಲಿ ಮಂಜುನಾಥ್ ಅಧ್ಯಕ್ಷರಾಗಿ ಆಯ್ಕೆಯಾದ ಮೇಲೆ ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಯುವ ಜನರ ಮತಗಳೇ ಮುಂಬರುವ ಚುನಾವಣೆಗಳಿಗೆ ನಿರ್ಣಾಯಕವಾಗಿವೆ ಎಂದರು. ಕಾಂಗ್ರೆಸ್ ಯುವಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾತೀಕ್, ಅರಕಲಗೂಡು ತಾಲೂಕು ಅಧ್ಯಕ್ಷ ನಯೀಮ್, ಸಕಲೇಶಪುರ ತಾಲೂಕು ಅಧ್ಯಕ್ಷ ಧರ್ಮ, ಅಲೂರು ತಾಲೂಕು ಅಧ್ಯಕ್ಷ ಚಂದ್ರಶೇಖರ್, ಮುಖಂಡರಾದ ಸಚಿನ್‌ಗೌಡ, ಸಾಮಿಲ್ ರಘು, ಸೀಗೆ ಕೊಪ್ಪಲು ಮಂಜಣ್ಣ, ಕಾಂತರಾಜು, ಕಿರಣ್ ರಂಗಸ್ವಾಮಿ ಇತರರು ಇದ್ದರು.