ನಿರುದ್ಯೋಗಿಗಳ ಸಮೀಕ್ಷೆಗೆ ಯುವ ಕಾಂಗ್ರೆಸ್‌ನಿಂದ ಆ್ಯಪ್ ಬಿಡುಗಡೆ

WhatsApp Image 2022-07-16 at 4.59.28 PM
Published on

ಉಡುಪಿ: ರಾಜ್ಯ ಯುವ ಕಾಂಗ್ರೆಸ್‌ನಿಂದ ನಿರುದ್ಯೋಗಿಗಳ ಸಮೀಕ್ಷೆಗೆ ಉದ್ಯೋಗ ಸೃಷ್ಟಿ ಆ್ಯಪ್ ಬಿಡುಗಡೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬ್ಲಾಕ್ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿರುದ್ಯೋಗಿಗಳ ಸರ್ವೇ ನಡೆಸಲಾಗುವುದು ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಸಂಯೋಜಕ ತೇಜಸ್ವಿ ತಿಳಿಸಿದ್ದಾರೆ.

ಶನಿವಾರ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ್ಯಪ್‌ನಿಂದಾಗಿ ನಿರುದ್ಯೋಗಿಗಳ ನಿಖರ ಸಂಖ್ಯೆ ದಾಖಲಾಗುತ್ತದೆ. ಈ ಡೇಟಾವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸಲ್ಲಿಸಿ, ಉದ್ಯೋಗ ಸೃಷ್ಟಿಗೆ ಒತ್ತಾಯಿಸಲಾಗುವುದು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದೇ ಡೇಟಾ ಆಧಾರದಲ್ಲಿ ಉದ್ಯೋಗ ಸೃಷ್ಟಿಗೆ ಯೋಜನೆಗಳನ್ನು ರೂಪಿಸಲಾಗುವುದು. ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಸೂಚನೆಯಂತೆ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಯೂಥ್ ಜೂಡೋ ಬೂತ್ ಜೋಡೋ ಎನ್ನುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಭವ್ಯಾ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ನವೀನ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ, ಕಾಪು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ರಮೀಝ್ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net