

ಹಳೆಯಂಗಡಿ: ಮೂಲ್ಕಿ-ಮೂಡುಬಿದಿರೆ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್‌ನ ಸದಸ್ಯತನ ಅಭಿಯಾನಕ್ಕೆ ಯುವ ಜನತೆಯಿಂದ ಉತ್ತಮ ಸ್ಪಂದನೆ ಸಿಗಲಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಹೇಳಿದರು.
ಹಳೆಯಂಗಡಿಯಲ್ಲಿ ಗುರುವಾರ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್‌ನ ಮೂಲ್ಕಿ ಮತ್ತು ಮೂಡುಬಿದಿರೆ ಬ್ಲಾಕ್‌ನ ಯುವ ಕಾಂಗ್ರೆಸ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಸದಸ್ಯ ಎಚ್.ವಸಂತ ಬೆರ್ನಾಡ್ ಅಭಿಯಾನ ಹಾಗೂ ಸದಸ್ಯರ ಕರ್ತವ್ಯದ ಬಗ್ಗೆ ಮಾಹಿತಿ ನೀಡಿದರು.
ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್ ನಿರೂಪಿಸಿದರು. ಪ್ರಮುಖರಾದ ಚಂದ್ರಹಾಸ ಸನಿಲ್, ಸಾಹುಲ್ ಹಮೀದ್, ಮಂಜುನಾಥ ಕಂಬಾರ್ ಮತ್ತಿತರರು ಉಪಸ್ಥಿತರಿದ್ದರು.