ಕಾಂಗ್ರೆಸ್ ಮರಳಿ ಅಧಿಕಾರಕ್ಕೇರಲು ಶ್ರಮ: ತೇಜಸ್ವಿ ಮಂಜ್ರೇಕರ್ ಕರೆ

congress
Published on

ಹಳೆಯಂಗಡಿ: ಸಂಘಟನೆ ಮೂಲಕ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮವಹಿಸಬೇಕು ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ತೇಜಸ್ವಿ ಮಂಜ್ರೇಕರ್ ಹೇಳಿದರು.


ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಯೂತ್ ಜೋಡೊ ಬೂತ್ ಜೋಡೊ ಸಮಾವೇಶದಲ್ಲಿ ಮಾತನಾಡಿದರು. ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯಾ ಕೆ.ಆರ್ ಮಾತನಾಡಿ, ಪದಾಧಿಕಾರಿಗಳು ಕಾರ್ಯಕರ್ತ ಜತೆ ಹೊಂದಾಣಿಕೆಯಿಂದ ಕೆಲಸ ಮಾಡಿ ಆಡಳಿತ ಪಕ್ಷದ ವೈಫಲ್ಯಗಳನ್ನು ಜನರಿಗೆ ಮನದಟ್ಟು ಮಾಡಿ ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ತಿಳಿಸುವ ಯತ್ನ ಮಾಡಬೇಕು ಎಂದರು.


ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮನ್ ಬಂಟ್ವಾಳ, ರಾಜ್ಯ ಕಾರ್ಯದರ್ಶಿ ಸರ್ಫ್ರಾಜ್ ನವಾಜ್, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಆಳ್ವ, ಪ್ರಧಾನ ಕಾರ್ಯದರ್ಶಿ ರೂಪೇಶ್ ರೈ, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್, ಮೂಡುಬಿದಿರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್ ಶೆಟ್ಟಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net