ವಿಷ ಪದಾರ್ಥ ಸೇವನೆಯಿಂದ ಸಾವು

30082022 Commits Suicide Web - Copy
Published on

ಕುಂದಾಪುರ: ಶಂಕರನಾರಾಯಣ ಗ್ರಾಮ ಕೃಷ್ಣ ನಾಯ್ಕ ಎಂಬವರ ಪುತ್ರ ಅಜಿತ್(21) ಭಾನುವಾರ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಜಿತ್ ವಿಪರೀತ ಜ್ವರದಿಂದ ಬಳಲುತ್ತಿದ್ದು ಸೆ.19ರಂದು ಸಿದ್ದಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲು ಮಾಡಲಾಗಿತ್ತು. ಚಿಕಿತ್ಸೆ ನೀಡಿದ ವೈದ್ಯರು ಅಜಿತ್‌ಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದು, ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದರು.

ಮಣಿಪಾಲ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದ ವೈದ್ಯಾಧಿಕಾರಿ ಅಜಿತ್ ಯಾವುದೋ ವಿಷ ಪದಾರ್ಥ ಸೇವಿಸಿರುವುದಾಗಿ ತಿಳಿಸಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net