ಹಾಡಹಗಲೇ ಯುವಕನಿಗೆ ಇರಿತ; ರಕ್ತದ ಮಡುವಲ್ಲಿದ್ದಾತ ಮಾರ್ಗಮಧ್ಯೆಯೇ ಸಾವು..

Gangadhar
Published on

ವಿಜಯನಗರ: ಹಾಡಹಗಲೇ ಯುವಕನೊಬ್ಬನಿಗೆ ಇರಿಯಲಾಗಿದ್ದು, ರಕ್ತದ ಮಡುವಲ್ಲಿ ಬಿದ್ದಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವಿಗೀಡಾಗಿದ್ದಾನೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಈ ದುಷ್ಕೃತ್ಯ ನಡೆದಿದೆ.

ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದ ಗಂಗಾಧರ ಸಾವಿಗೀಡಾದ ವ್ಯಕ್ತಿ. ಹೊಸಪೇಟೆ-ಬಳ್ಳಾರಿ ರಸ್ತೆಯಲ್ಲಿರುವ ಯಶ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಎದುರು ಈ ಘಟನೆ ಸಂಭವಿಸಿದೆ.

ಗಂಗಾಧರ್​ಗೆ ಯಾರೋ ಬಾಟಲಿ ಚೂರಿನಿಂದ ಇರಿದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ಮಾರ್ಗಮಧ್ಯೆ ಸಾವಿಗೀಡಾಗಿದ್ದಾನೆ. ಈತನ ಕುರಿತ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.

ವೈಯಕ್ತಿಕ ದ್ವೇಷದಿಂದ ಇರಿಯಲಾಗಿದೆ ಎಂದು ಅಂದಾಜಿಸಲಾಗಿದ್ದು, ಕೊಲೆಗೆ ನಿಖರ ಕಾರಣ ಖಚಿತವಾಗಿ ಇನ್ನೂ ತಿಳಿದುಬಂದಿಲ್ಲ. ಹೊಸಪೇಟೆ ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net