ಹಾವು ಕಡಿತಕ್ಕೊಳಗಾಗಿ ಯುವಕ ಸಾವು

28HNL2-Siddalingesh Haravi
Published on

ಹಾನಗಲ್ಲ: ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಹಾವು ಕಡಿತಕ್ಕೊಳಗಾಗಿ ಯುವಕ ಸಾವನ್ನಪ್ಪಿದ ಘಟನೆ ತಾಲೂಕಿನ ಕಂಚಿನೆಗಳೂರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಗ್ರಾಮದ ಯುವಕ ಸಿದ್ದಲಿಂಗೇಶ ಹರವಿ (25) ಹಾವು ಕಡಿತಕ್ಕೊಳಗಾಗಿ ಸಾವನ್ನಪ್ಪಿದ ದುರ್ದೈವಿ. ಭಾನುವಾರ ಮಧ್ಯಾಹ್ನ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿರುವ ವೇಳೆ ಹಾವು ಕಚ್ಚಿತ್ತು. ಈತನನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net