ಬಂಟ್ವಾಳದ ಪುರಾಣ ಪ್ರಸಿದ್ಧ ಕಾರಿಂಜ ಕ್ಷೇತ್ರಕ್ಕೆ ತೆರಳಿದ್ದ ಯುವಕ ಕೆರೆಗೆ ಬಿದ್ದು ಸಾವು

Lake Fe 20
Published on

ಮಂಗಳೂರು: ಬಂಟ್ವಾಳ ತಾಲೂಕಿನ ಪುರಾಣ ಪ್ರಸಿದ್ಧ ಕಾರಿಂಜ ಕ್ಷೇತ್ರದ ಗಜತೀರ್ಥ ಕೆರೆಯಲ್ಲಿ ಯುವಕನೋರ್ವ ಮೃತಪಟ್ಟಿದ್ದಾನೆ.

ಸದೇಶ್​ (26) ಮೃತ. ಇಬ್ಬರು ಸ್ನೇಹಿತರೊಂದಿಗೆ ಕ್ಷೇತ್ರಕ್ಕೆ ಬಂದಿದ್ದ. ಈ ವೇಳೆ ರಸ್ತೆ ಪಕ್ಕವೇ ಇರುವ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾನೆ. ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net