ಆಟೋಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಯುವಕ ಸಾವು

Accident
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಆಟೋಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ತಲವಾಯಿ- ಕನಕೂರ ನಡುವೆ ಮಂಗಳವಾರ ಸಂಜೆ ನಡೆದಿದೆ. ಹುಬ್ಬಳ್ಳಿ ತಾಲೂಕು ಅಂಚಟಗೇರಿ ಗ್ರಾಮದ ಪ್ರಕಾಶ ಭೀಮಪ್ಪ ವಾಲೀಕಾರ (23) ಮೃತ ಯುವಕ. ಆಟೋದಲ್ಲಿ ಯಲ್ಲಮ್ಮನಗುಡ್ಡಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಮಿನಿ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡಿದ್ದ ಪ್ರಕಾಶನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕೊನೆಯುಸಿರೆಳೆದಿದ್ದಾನೆ. ಆಟೋದಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net