ಶಾಲಾ ವಾಹನ ಬೈಕ್‌ಗೆ ಡಿಕ್ಕಿಯಾಗಿ ಯುವಕ ಸಾವು

Published on

ರಾಮನಗರ: ರಾಮನಗರ ಸಂಚಾರಿ ಠಾಣೆ ವ್ಯಾಪ್ತಿಯ ಜಿಲ್ಲಾಧಿಕಾರಿ ನಿವಾಸದ ಎದುರು ಗುರುವಾರ ಖಾಸಗಿ ಶಾಲಾ ವಾಹನ ಬೈಕ್‌ಗೆ ಡಿಕ್ಕಿಯೊಡೆದು ಯುವಕನೊಬ್ಬ ಮೃತಪಟ್ಟಿದ್ದಾನೆ.

ತಾಲೂಕಿನ ಮೂಡಲಹಳ್ಳಿ ದೊಡ್ಡಿ ಅಮೃತ್‌ಗೌಡ (20) ಮೃತ. ಚನ್ನಪಟ್ಟಣದಿಂದ ರಾಮನಗರಕ್ಕೆ ಬೈಕ್‌ನಲ್ಲಿ ಬರುವ ವೇಳೆ ಜಿಲ್ಲಾಧಿಕಾರಿ ನಿವಾಸದ ಎದುರು ತಿರುವು ಪಡೆಯುತ್ತಿದ್ದ ಶಾಲಾ ಬಸ್‌ಗೆ ಬೈಕ್ ಡಿಕ್ಕಿಯೊಡೆದಿದ್ದು, ತಲೆಗೆ ತೀವ್ರ ಪೆಟ್ಟಾಗಿ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಶವಪರೀಕ್ಷೆ ನಡೆಸಿ ಮೃತ ದೇಹವನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗಿದೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net