ನಿಂತಿದ್ದ ವಾಹನಕ್ಕೆ ಸ್ಕೂಟಿ ಡಿಕ್ಕಿ: ಯುವಕ ಸಾವು, ಮಹಿಳೆಗೆ ಗಾಯ

padubidri
ಅಪಘಾತದಿಂದ ಸ್ಕೂಟಿ ನಜ್ಜುಗುಜ್ಜಾಗಿದೆ.
Published on

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಆಡಿಟೋರಿಯಂವೊಂದರ ಎದುರು ನಿಂತಿದ್ದ ಬೊಲೆರೋ ವಾಹನಕ್ಕೆ ಸ್ಕೂಟಿ ಡಿಕ್ಕಿಯಾಗಿ ಸ್ಕೂಟಿ ಸವಾರ ಹೆಜಮಾಡಿಯ ಮುಫ್ರೀನ್(18) ಮೃತಪಟ್ಟು ಆತನ ತಾಯಿ ಹಾಜಿರಾ ಭಾನು ಗಾಯಗೊಂಡಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಗಂಭೀರ ಗಾಯಗೊಂಡಿರುವ ಹಾಜಿರಾ, ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಕೂಟಿ ಮುಂಭಾಗ ನಜ್ಜುಗುಜ್ಜಾಗಿದೆ.

ಮುಫ್ರೀನ್ ಭಾನುವಾರ ಬೆಳಗ್ಗೆ ಹೆಜ್ಮ್ಮಾಡಿಯಿಂದ ತನ್ನ ತಾಯಿಯನ್ನು ಚಿಕಿತ್ಸೆಗೆಂದು ಉಡುಪಿಗೆ ದ್ವಿಚಕ್ರ ವಾಹನವೊಂದರಲ್ಲಿ ಕರೆದೊಯ್ಯುತ್ತಿದ್ದ ವೇಳೆ ಉದ್ಯಾವರದಲ್ಲಿ ನಿಲ್ಲಿಸಲಾಗಿದ್ದ ಬೊಲೆರೋ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಮುಫ್ರೀನ್ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net