ವರದಾ ನದಿಯಲ್ಲಿ ಮುಳುಗಿ ಯುವಕ ಸಾವು

Crime Logo
Published on

ಹಾನಗಲ್ಲ: ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ವರದಾ ನದಿಗೆ ಸ್ನಾನಕ್ಕೆಂದು ಇಳಿದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ತಲಗಡ್ಡೆ ಸಮೀಪ ವರದಾ ನದಿಯಲ್ಲಿ ಸೋಮವಾರ ನಡೆದಿದೆ. ಹಾನಗಲ್ಲ ತಾಲೂಕಿನ ನಿಟಗಿನಕೊಪ್ಪ ಗ್ರಾಮದ ಪ್ರವೀಣ ಹಂಚಿನಮನಿ(25) ಮೃತ ಯುವಕ. ತಲಗಡ್ಡೆ ಸಮೀಪದ ದೇವಸ್ಥಾನಕ್ಕೆಂದು ಕುಟುಂಬ ಸಮೇತರಾಗಿ ಸೋಮವಾರ ತೆರಳಿದ್ದ ವೇಳೆ, ನದಿಯಲ್ಲಿ ಸ್ನಾನಕ್ಕೆ ಇಳಿದ ಪ್ರವೀಣ, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಅಗ್ನಿಶಾಮಕ ಠಾಣೆ ಸಿಬ್ಬಂದಿ ಸತತ ಆರು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿ, ಯುವಕನ ಶವವನ್ನು ನದಿಯಿಂದ ಹೊರತೆಗೆದಿದ್ದಾರೆ. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net