ಅರ್ಜಿ ಆಹ್ವಾನ

Youth empowerment and sports
Published on

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25ನೇ ಸಾಲಿನ ಜನಪದ ಕಲಾ ಪ್ರಕಾರಗಳ ತರಬೇತಿ ಶಿಬಿರವನ್ನು ಸೆ. 09 ರಿಂದ 15ವರೆಗೆ ಆಯೋಜಿಸಲಾಗಿದ್ದು, ಆಸಕ್ತ ಯುವಕ/ಯುವತಿಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಸೆ. 5ರೊಳಗೆ ಅರ್ಜಿ ಸಲ್ಲಿಸಹಬಹುದಾಗಿದ್ದು, ಅರ್ಜಿ ಹಾಗೂ ಮಾಹಿತಿಗಾಗಿ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಕೊಠಡಿ ಸಂಖ್ಯೆ: 17-18, ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣ, ಕಸ್ತೂರಬಾ ರಸ್ತೆ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ: 080-22239771 ಗೆ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net