ಮೈಸೂರಿನಲ್ಲಿ ಸೆ.10 ರಿಂದ ಯುವ ಸಂಭ್ರಮ

Yuva Sambhrama in Mysore from September 10
Published on

ಮೈಸೂರು: ನಾಡಹಬ್ಬ ದಸರಾ ಉತ್ಸವ ಅಂಗವಾಗಿ ಯುವಜನರಿಗೆ ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆ ಒದಗಿಸುವ ಸಲುವಾಗಿ ಪ್ರತಿ ಬಾರಿಯಂತೆ ಈ ಬಾರಿಯೂ ಯುವ ಸಂಭ್ರಮ ಆಯೋಜಿಸಲಾಗಿದ್ದು, ನಗರದ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಬುಧವಾರ ಯುವಸಂಭ್ರಮಕ್ಕೆ ಚಾಲನೆ ದೊರೆಯಲಿದೆ.

ಈ ಬಾರಿ ಯುವ ಸಂಭ್ರಮವನ್ನು ಸೆ.10 ರಿಂದ 20ರವರೆಗೆ ಆಯೋಜಿಸಲಾಗಿದ್ದು, 400ಕ್ಕೂ ಹೆಚ್ಚು ರಾಜ್ಯದ ವಿವಿಧ ಕಾಲೇಜುಗಳ ತಂಡಗಳು ಭಾಗವಹಿಸಲಿವೆ. ಯುವ ಸಂಭ್ರಮದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಕೆಲವು ತಂಡಗಳನ್ನು ಯುವ ದಸರಾಗೆ ಆಯ್ಕೆ ಮಾಡಲಾಗುವುದು. ಹೀಗಾಗಿ ಎಲ್ಲ ಕಾಲೇಜು ತಂಡಗಳು ಅತ್ಯುತ್ತಮ ಪ್ರದರ್ಶನ ನೀಡಲು ಸಾಕಷ್ಟು ತಯಾರಿ ಮಾಡಿಕೊಂಡು ನಗರಕ್ಕೆ ಬುಧವಾರ ಆಗಮಿಸಲಿದ್ದಾರೆ.

ಹತ್ತು ದಿನಗಳ ಬೃಹತ್ ಯುವ ಸಂಭ್ರಮದಲ್ಲಿ ಬೀದರ್‌ನಿಂದ ಚಾಮರಾಜನಗರದವರೆಗೆ ರಾಜ್ಯದ ಎಲ್ಲ ಜಿಲ್ಲೆಗಳ ವಿವಿಧ ಕಾಲೇಜುಗಳ ತಂಡಗಳು ಭಾಗವಹಿಸಲಿವೆ. ವಾನಸಗಂಗೋತ್ರಿಂು ಬಂುಲು ರಂಗಮಂದಿರವನ್ನು ಈಗಾಗಲೇ ಕಾರ್ಯಕ್ರಮಕ್ಕೆ ಸಜ್ಜುಗೊಳಿಸಲಾಗಿದೆ.

ಬಯಲು ರಂಗಮಂದಿರದಲ್ಲಿ ವಿದ್ಯುತ್ ದೀಪಾಲಂಕಾರ, ತ್ರೀಡಿ ಸೌಂಡ್ ಅಳವಡಿಕೆ, ಕಾಲೇಜು ಯುವಕ-ಯುವತಿಯರಿಗೆ ಪ್ರತ್ಯೇಕ ಮೊಬೈಲ್ ಶೌಚಗೃಹ ವ್ಯವಸ್ಥೆ ಮಾಡಲಾಗಿದೆ. ಅತಿಥಿಗಳಿಗೆ ಪ್ರತ್ಯೇಕ ಕೊಠಡಿ ತೆರೆಯಲಾಗಿದೆ. ವಿವಿಐಪಿ, ವಿಐಪಿಗಳಿಗೆ ಪ್ರತ್ಯೇಕ ಗ್ಯಾಲರಿ, ಸಮಿತಿ ಪದಾಧಿಕಾರಿಗಳು, ಅಧಿಕಾರಿಗಳಿಗೆ ಗ್ಯಾಲರಿ, ಸಾರ್ವಜನಿಕರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಬೋಗಾದಿ ಮತ್ತು ಹುಣಸೂರು ಭಾಗದಿಂದ ಬಯಲುರಂಗಮಂದಿರಕ್ಕೆ ಬರುವ ಮಾರ್ಗಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಿ ಕಣ್ಮನ ಸೆಳೆಯುವಂತೆ ಮಾಡಲಾಗಿದೆ. ಆಹ್ವಾನಿತರಲ್ಲದವರು ವೇದಿಕೆಗೆ ಬಾರದಂತೆ ನೋಡಿಕೊಳ್ಳಲು ಪ್ರತ್ಯೇಕ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಮೊದಲ ದಿನ ನಟ ರಾಘವೇಂದ್ರ ರಾಜಕುಮಾರ್ ಪುತ್ರ ಯುವರಾಜ್ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ವಿಶ್ವ ವಿದ್ಯಾಲಯಗಳು, ಪದವಿ ಕಾಲೇಜುಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ, ವೈದ್ಯಕೀಂು, ಇಂಜಿನಿಂುರಿಂಗ್, ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಂುುವ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪ್ರತಿದಿನ ಸಂಜೆ 6ರಿಂದ 10 ಗಂಟೆಯವರೆಗೆ ಕಾಂರ್ುಕ್ರಮ ನಡೆಂುಲಿದೆ. ಪ್ರತಿದಿನ ತಲಾ 40ರಿಂದ 50 ತಂಡಗಳ ಪ್ರದರ್ಶನ ನಡೆಸಲು ತೀರ್ವಾನಿಸಲಾಗಿದೆ. ಪ್ರತಿದಿನ 2 ಅಥವಾ 3 ತಂಡಗಳನ್ನು ಆಯ್ಕೆ ಮಾಡಿ ಂುುವ ದಸರಾದಲ್ಲಿ ಅವರಿಗೆ ಪ್ರದರ್ಶನ ನೀಡಲು ಅವಕಾಶ ನೀಡಲಾಗುವುದು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಂೋಜನೆಗಳು, ಕಾನೂನು ಸುವ್ಯವಸ್ಥೆ, ಸಂವಿಧಾನ ಮತ್ತು ಶಾಸನ, ಹಕ್ಕು ಮತ್ತು ಕರ್ತವ್ಯಗಳು, ವಾದಕ ವ್ಯಸನ ಮುಕ್ತ ಸವಾಜ, ನಾಲ್ವಡಿ ಕೃಷ್ಣರಾಜ ಒಡೆಂುರ್, ಮೈಸೂರು ದಸರಾ, ಡಾ.ಬಿ.ಆರ್.ಅಂಬೇಡ್ಕರ್, ಕರ್ನಾಟಕ ಜಾನಪದ ವೈವಿಧ್ಯತೆ, ಪರಂಪರೆ, ಕನ್ನಡ ಸಾಹಿತ್ಯ ಇನ್ನಿತರೆ ಥೀಮ್‌ಗಳನ್ನು ಈ ಬಾರಿ ವಿದ್ಯಾರ್ಥಿಗಳಿಗೆ ನೀಡಲಾಗಿದ್ದು, ಈ ಥೀಮ್‌ನಡಿಯಲ್ಲಿ ವಿದ್ಯಾರ್ಥಿಗಳು ನೃತ್ಯವನ್ನು ಪ್ರದರ್ಶಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net