ನಿರುದ್ಯೋಗಿ ಯುವಪೀಳಿಗೆಗೆ ಯುವನಿಧಿ ಅನುಕೂಲ

BYN-May08-1-Yuvanidhi-1
Published on

ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯ ಕುರಿತು ಪ್ರಚಾರ ಮತ್ತು ನೋಂದಣಿ ಅಭಿಯಾನ ಕೈಗೊಳ್ಳಲಾಯಿತು.

ಬೈಂದೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಮೋಹನ ಪೂಜಾರಿ ಮಾತನಾಡಿ, ಸರ್ಕಾರದ ಈ ಯೋಜನೆ ನಿರುದ್ಯೋಗಿ ಯುವಪೀಳಿಗೆಗೆ ತುಂಬಾ ಅನುಕೂಲಕರವಾಗಿದೆ. ಪದವಿ ಮುಗಿದು ಉದ್ಯೋಗ ಸಿಗದ ಅರ್ಹ ಫಲಾನುಭವಿಗಳು ಯೋಜನೆಯನ್ನು ಸದುಪಯೋಗಿಸಬೇಕು ಎಂದು ಸಲಹೆ ನೀಡಿದರು.

ಉದ್ಯೋಗ ವಿನಿಮಯ ಕಚೇರಿಯ ಸಿಬ್ಬಂದಿ ಲತಾ, ಯುವನಿಧಿ ಯೋಜನೆ ಪಡೆದುಕೊಳ್ಳುವ ಬಗ್ಗೆ ಮತ್ತು ಮಾನದಂಡಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಪ್ರಾಶುಪಾಲ ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸದಸ್ಯರಾದ ಬಾಬು ದೇವಾಡಿಗ, ಅನಿಶ್ ಕುಮಾರ್, ಸೂರ್ಯಕಾಂತಿ, ಮಾಲತಿ ಶಿವಾನಂದ್ ಮತ್ತು ಕಾಲೇಜಿನ ಉಪನ್ಯಾಸಕರು ಇದ್ದರು. ಉಪನ್ಯಾಸಕ ವಿನೋದ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net