ಮಹನೀಯರ ಜಯಂತಿಯಿಂದ ಯುವಕರಿಗೆ ಪ್ರೇರಣೆ

FotoJet 1111
Published on

ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿಕೆ

ಬಂಗಾರಪೇಟೆ: ಕನಕದಾಸರು ವಿಶ್ವ ಕಂಡ ಸರ್ವ ಶ್ರೇಷ್ಠ ಸಂತ. ಸವಾಜದಲ್ಲಿನ ಜಾತಿ ವ್ಯವಸೆ ಹೋಗಲಾಡಿಸಲು ಪ್ರಯತ್ನಿಸಿದ್ದು, ಸವಾಜ ಸುಧಾರಣೆಗೆ ಮುನ್ನುಡಿ ಬರೆದಿದ್ದಾರೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ತಾಲೂಕು ಆಡಳಿತ ಕಚೇರಿಯ ಭೀಮ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಕನಕದಾಸರ ಜಯಂತಿ ಪೂರ್ವಭಾವಿ ಸಭೆಯಲ್ಲಿ ವಾತನಾಡಿ, ಕನಕದಾಸರು ಸವಾಜದ ಅಭ್ಯುದಯಕ್ಕೆ ಶ್ರಮಿಸಿದರು. ಇಂಥ ದಾರ್ಶನಿಕರ ಜಯಂತಿ ಯುವ ಸಮುದಾಯಕ್ಕೆ ಸ್ಫೂರ್ತಿಯಾಗಲಿದೆ. ನ.8ರಂದು ಬೆಳಗ್ಗೆ ಕನಕ ಭವನದಲ್ಲಿ ಧ್ವಜಾರೋಹಣ, ನಂತರ ಅಂಬೇಡ್ಕರ್ ಪುತ್ಥಳಿಗೆ ವಾಲಾರ್ಪಣೆ, ಪುರಸಭೆ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಮಾಡಿ ಸ್ಥಬ್ದ ಚಿತ್ರಗಳಿಗೆ ವಿದ್ಯುಕ್ತ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಕೋಲಾರ ಮುಖ್ಯರಸ್ತೆಯಲ್ಲಿ ಖಾಲಿ ನಿವೇಶನದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪಿಸಲಾಗುವುದು ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಣ್ಣ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಪ್ರತಿಭಾ, ಬಿಸಿಎಂ ಅಧಿಕಾರಿ ಅನಿತಾ, ಪೊಲೀಸ್ ಇನ್‌ಸ್ಪೆಕ್ಟರ್ ದಯಾನಂದ್, ಟಿಎಚ್‌ಒ ಸುನಿಲ್, ಶಿಕ್ಷಕರಾದ ಸುಜಾತಾ, ರಾಜಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net