ಯುವಜನಾಂಗ ಕನ್ನಡದ ರಾಯಭಾರಿ

Upp_Ambassador
Published on

ಉಪ್ಪಿನಂಗಡಿ: ಕನ್ನಡ ನಾಡು, ನುಡಿ, ಸಂಸ್ಕೃತಿಯ ಅರಿವು ಮೂಡಿಸುವಲ್ಲಿ ಶಿಕ್ಷಕರ ಮತ್ತು ಹೆತ್ತವರ ಪಾತ್ರ ಬಹಳಷ್ಟಿದೆ. ಕನ್ನಡ ಸಂಸ್ಕೃತಿಯ ರಾಯಭಾರಿಗಳನ್ನಾಗಿ ಯುವ ಜನಾಂಗವನ್ನು ಮೂಡಿಸುವ ನಿಟ್ಟಿನಲ್ಲಿ ಸಮಾಜದ ಪ್ರತಿಯೊಬ್ಬರೂ ಶ್ರಮಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಹೇಳಿದರು.

ಇಳಂತಿಲ ಗ್ರಾಮದ ಅಂಡೆತ್ತಡ್ಕ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ 14ನೇ ಕನ್ನಡ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದರು.

ಅತಿಥಿ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು ಮಾತನಾಡಿ, ಕನ್ನಡ ಭಾಷೆಯ ಸೊಬಗು ಸವಿಯುವ ಮತ್ತು ಪ್ರಕಟಿಸುವ ನಿಟ್ಟಿನಲ್ಲಿ ಯುವ ಮನಸುಗಳನ್ನು ತಲುಪಬೇಕಾಗಿದೆ ಎಂದರು.

ಇಳಂತಿಲ ಕನ್ನಡ ಬಳಗದ ಅಧ್ಯಕ್ಷ ಬಿ.ಸುಬ್ರಹ್ಮಣ ರಾವ್ ಪ್ರಾಸ್ತವಿಕವಾಗಿ ಮಾತಾನಾಡಿದರು. ಪೆಲಪ್ಪಾರು ವೆಂಕಟರಮಣ ಭಟ್, ಮುಖ್ಯಶಿಕ್ಷಕ ಕೃಷ್ಣಪ್ಪ ಪೂಜಾರಿ, ಶಿಕ್ಷಕರಾದ ಅಣ್ಣಪ್ಪ, ಗಿರಿಜಾ, ಸಂತೋಷ ಮತಿತ್ತರು ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಸ್ವಾಗತಿಸಿ, ಶಿಕ್ಷಕಿ ನಯನ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net