

ಸಿರಿಗೆರೆ: ಹಿರಿಯರ ತ್ಯಾಗ ಬಲಿದಾನ ಮತ್ತು ಹೋರಾಟಗದಿಂದ ದೇಶಕ್ಕೆ ಸ್ವತಂತ್ರ ಸಿಕ್ಕಿದೆ ಎಂದು ರಾಜ್ಯ ರೈತ ಸಂಘ ಹಾಗೂ ಶ್ರೀಮತ್ ಸಾಧು ಸದ್ಧರ್ಮ ವೀರಶೈವ ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ಅಭಿಪ್ರಾಯಟ್ಟರು.
ಬಿ.ಲಿಂಗಯ್ಯ ವಸತಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸಿರಿಗೆರೆ ಸಂಘ ಸಂಸ್ಥೆಗಳ ಶಾಲಾ-ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಯುವ ಪೀಳಿಗೆ ಉತ್ತಮ ಶಿಕ್ಷಕ, ವೈದ್ಯ, ಇಂಜಿನಿಯರ್ ಆಗುವ ಜತೆಗೆ ಕೃಷಿಯಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು. ಇದರಿಂದ ಮಾತ್ರ ದೇಶದ ಸಮಗ್ರ ಬೆಳವಣಿಗೆ ಸಾಧ್ಯ. ಭಾರತದ ಬಹುದೊಡ್ಡ ಶಕ್ತಿ ಮತ್ತು ನಿಜವಾದ ಆಸ್ತಿ ಯುವ ಪೀಳಿಗೆ ಎಂಬುದನ್ನು ನಾವೆಲ್ಲರೂ ಅರಿತುಕೊಳ್ಳಬೇಕು ಎಂದರು.
ವಿದ್ಯಾಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರೊ.ಎಸ್.ಬಿ.ರಂಗನಾಥ್ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಡಾ.ಎಚ್.ವಿ.ವಾಮದೇವಪ್ಪ, ಡಾ.ಎಚ್.ಕೆ.ನಾರಾಯಣಸ್ವಾಮಿ, ಗ್ರಾಪಂ ಅಧ್ಯಕ್ಷೆ ಹಾಲಮ್ಮ ಬೈರಪ್ಪ, ಅಣ್ಣನ ಬಳಗದ ಅಧ್ಯಕ್ಷ ಬಿ.ಎಸ್.ಮರುಳಸಿದ್ದಯ್ಯ ಇತರರಿದ್ದರು.