ವಿದ್ಯುತ್‌ ಶಾಕ್‌ಗೆ ಕಡಬದ ಯುವಕ ಬಲಿ

Published on

ಕಡಬ: ತೆಂಗಿನ ಕಾಯಿ ಕೊಯ್ಯುವ ವೇಳೆ ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬದಲ್ಲಿ ಇಂದು ನಡೆದಿದೆ.
ಮೃತ ವ್ಯಕ್ತಿಯನ್ನು ಕಡಬ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬವರ ಪುತ್ರ ಲಿಜು (35) ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಗ್ಗೆ ತನ್ನ ಮನೆಯ ಮುಂಭಾಗದಲ್ಲಿ ಕಬ್ಬಿಣದ ಸಲಾಕೆಯಿಂದ ತೆಂಗಿನಕಾಯಿ ತೆಗೆಯುತ್ತಿದ್ದ ವೇಳೆ ಸಲಾಕೆಯು ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ವಿದ್ಯುತ್ ಹರಿದು ಲಿಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net